ಹೈದರಾಬಾದ್(ತೆಲಂಗಾಣ): ಹೈದರಾಬಾದ್ ನಗರದ 103ವರ್ಷ ವಯಸ್ಸಿನ ವೃದ್ಧರೊಬ್ಬರು ಕೊರೊನಾವನ್ನೇ ಹಿಮ್ಮೆಟ್ಟಿಸುವ ಮೂಲಕ ಗಮನ ಸೆಳೆದಿದ್ದಾರೆ. ವೈರಸ್ನಿಂದ ಯಶಸ್ವಿಯಾಗಿ ಚೇತರಿಸಿಕೊಂಡಿದ್ದು, ಇದು ಕೋವಿಡ್-19 ರೋಗಿಗಳಿಗೆ ಭರವಸೆಯ ಕಿರಣವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪರುಚುರಿ ರಾಮಸ್ವಾಮಿ ಅವರು ತೆಲಂಗಾಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ (ಟಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದರು. ಅವರು ಹೈದರಾಬಾದ್‌ನ ಕೊಂಡಾಪುರದಲ್ಲಿರುವ ಚಂದ್ರ ರಾಜೇಶ್ವರ ರಾವ್ ಪ್ರತಿಷ್ಠಾನದೊಂದಿಗೆ ಸಂಬಂಧ ಹೊಂದಿದ್ದರು.
ಗುಣಮುಖರಾದ ಬಳಿಕ ರಾಮಸ್ವಾಮಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ, ಸರ್ಕಾರ ಮತ್ತು ರಾಜ್ಯ ಆರೋಗ್ಯ ಸಚಿವ ಎಟೆಲಾ ರಾಜೇಂದರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ತೆಲಂಗಾಣ ರಾಜ್ಯ ಸರ್ಕಾರಿ ಆಸ್ಪತ್ರೆಗಳು, ವಿಶೇಷವಾಗಿ ತೆಲಂಗಾಣ ವೈದ್ಯಕೀಯ ವಿಜ್ಞಾನ ಸಂಸ್ಥೆ (ಟಿಮ್ಸ್), ಗಾಂಧಿ ಆಸ್ಪತ್ರೆ, ನೇಚರ್ ಕ್ಯೂರ್ ಆಸ್ಪತ್ರೆ ಮತ್ತು ಕಿಂಗ್ ಕೋಟಿ ಆಸ್ಪತ್ರೆಗಳಲ್ಲಿ ವಿಶೇಷ ಸೇವೆ ನೀಡುತ್ತಿದೆ ಎಂದು ಸಿಆರ್ ಫೌಂಡೇಶನ್ ಅಧ್ಯಕ್ಷ ಡಾ. ಕೆ.ನಾರಾಯಣ ಸರ್ಕಾರದ ಕಾರ್ಯವನ್ನು ಶ್ಲಾಘಿಸಿದರು.