ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳ ಕಂಡು ಬರುತ್ತಿದೆ. ಇದರ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 106 ವರ್ಷದ ವೃದ್ಧನೊಬ್ಬ ಸಂಪೂರ್ಣವಾಗಿ ಗುಣಮುಖರಾಗಿ ಕೊರೊನಾಕ್ಕೆ ಸೆಡ್ಡು ಹೊಡೆದಿದ್ದಾನೆ.
ಹಳೆ ದೆಹಲಿಯ ನವಾಬ್ಜಂಗ್ನಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದ 106 ವರ್ಷದ ವೃದ್ಧ ಕೇವಲ 17 ದಿನದಲ್ಲಿ ಮಹಾಮಾರಿ ಕೊರೊನಾದಿಂದ ಸಂಪೂರ್ಣ ಗುಣಮುಖವಾಗಿದ್ದಾರೆ.
ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದಿದ್ದರು. ನವಾಬ್ಜಂಗ್ ಪ್ರದೇಶದಲ್ಲಿ ವಾಸವಾಗಿದ್ದ 106 ವರ್ಷದ ಅಹಮ್ಮದ್ಗೆ ಏಪ್ರಿಲ್ 14 ರಂದು ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನ ತಕ್ಷಣವೇ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಇನ್ನು ಇವರ ಮಗನಿಗೆ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ 106 ವರ್ಷದ ಇವರು ಗುಣಮುಖರಾಗಿ ಮನೆಗೆ ತೆರಳಿರುವುದು ಮಾತ್ರ ಪವಾಡವೇ ಸರಿ.