ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ಶನಿವಾರ 12 ಮಂದಿ ಕೋವಿಡ್-19ಗೆ ಬಲಿಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 463ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.
ಕೋಲ್ಕತ್ತಾದಲ್ಲಿ ಅತಿ ಹೆಚ್ಚು ಒಂದೇ ದಿನಕ್ಕೆ 158 ಹೊಸ ಪ್ರಕರಣ ದಾಖಲಾಗಿವೆ. ನೆರೆಯ ಉತ್ತರ 24 ಪರಗಣ ಮತ್ತು ಹೌರಾ ಜಿಲ್ಲೆಗಳಲ್ಲಿ ಕ್ರಮವಾಗಿ 69 ಮತ್ತು 62 ಪ್ರಕರಣ ದಾಖಲಾಗಿವೆ. ರಾಜ್ಯದ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 10,698ಕ್ಕೆ ತಲುಪಿದೆ ಎಂದು ಬುಲೆಟಿನ್ ತಿಳಿಸಿದೆ.
ಇನ್ನೂ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ರೋಗದಿಂದ ಚೇತರಿಸಿಕೊಂಡ 336 ಜನರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 5,693 ಸಕ್ರಿಯ ಪ್ರಕರಣಗಳಿವೆ. ಒಟ್ಟು 4,542 ಜನರನ್ನು ಗುಣಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 9,008 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ನಡೆಸಿದ ಇಂತಹ ಕ್ಲಿನಿಕಲ್ ಪರೀಕ್ಷೆಗಳ ಒಟ್ಟು ಸಂಖ್ಯೆ 3,24,707 ತಲುಪಿದೆ.