ತೇಜ್ಪುರ್(ಅಸ್ಸೋಂ): 12 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ 10ನೇ ತರಗತಿ ವಿದ್ಯಾರ್ಥಿಗಳು ಆಕೆಯನ್ನ ಮರಕ್ಕೆ ನೇತು ಹಾಕಿರುವ ಘಟನೆ ಅಸ್ಸೋಂನ ತೇಜ್ಪುರ್ದಲ್ಲಿ ನಡೆದಿದೆ.
7 ವಿದ್ಯಾರ್ಥಿಗಳು ಸೇರಿ ಈ ಕೃತ್ಯವೆಸಗಿದ್ದು, 10ನೇ ತರಗತಿ ವಾರ್ಷಿಕ ಪರೀಕ್ಷೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಈ ಕೃತ್ಯವೆಸಗಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕರು ಆಕೆಯನ್ನ ಮರಕ್ಕೆ ನೇತು ಹಾಕಿ, ಕೊಲೆ ಮಾಡಿದ್ದಾರೆ ಎಂದು ಗೋಪುರ್ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇವರ ಬಂಧನ ಮಾಡಿ ವಿಚಾರಣೆ ನಡೆಸಿದಾಗ, ಪಾರ್ಟಿ ನೀಡುವ ನೆಪದಲ್ಲಿ ಆಕೆಯನ್ನ ಕರೆದುಕೊಂಡು ಹೋಗಿ ದುಷ್ಕೃತ್ಯವೆಸಗಿರುವುದಾಗಿ ತಿಳಿದು ಬಂದಿದೆ.
ಶುಕ್ರವಾರ ಈ ಘಟನೆ ನಡೆದಿದ್ದು, ಈಗಾಗಲೇ ಬಾಲಕಿ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.