ಅಲಿಗಢ: ಕೊರೊನಾ ವೈರಸ್ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಬ್ಬರು ಶ್ರೀಲಂಕಾ ಪ್ರಜೆಗಳು ಸೇರಿದಂತೆ 13 ತಬ್ಲಿಘಿ ಜಮಾತ್ ಸದಸ್ಯರನ್ನು ಬಂಧಿಸಲಾಗಿದೆ. ಇವರು ಸ್ಥಳೀಯ ಮಸೀದಿಯೊಂದರಲ್ಲಿ ಅಡಗಿ ಕುಳಿತಿದ್ದರು ಎಂದು ತಿಳಿದು ಬಂದಿದೆ.
ಬಂಧಿತ 13 ರಲ್ಲಿ 11 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಇಬ್ಬರು ಶ್ರೀಲಂಕಾ ಪ್ರಜೆಗಳನ್ನು ಜೈಲಿಗೆ ಕಳುಹಿಸಲಾಗಿದೆ. ಶ್ರೀಲಂಕಾ ಪ್ರಜೆಗಳ ಬಂಧನ ಕುರಿತಂತೆ ದೆಹಲಿಯಲ್ಲಿರುವ ಶ್ರೀಲಂಕಾ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಬಂಧಿತ 13 ಜನರ ಮೇಲೆ ಐಪಿಸಿ ಸೆಕ್ಷನ್ 188 ಹಾಗೂ 269 ರಡಿ ಪ್ರಕರಣ ದಾಖಲಿಸಲಾಗಿದೆ. ಶ್ರೀಲಂಕಾ ಪ್ರಜೆಗಳ ವಿರುದ್ಧ ಈ ಸೆಕ್ಷನ್ಗಳ ಮೇಲೆ ಹೆಚ್ಚುವರಿಯಾಗಿ ಸೆಕ್ಷನ್ 14 ಮತ್ತು 14 ಸಿ ಅಡಿ, ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ವೀಸಾ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ.
ಲಾಕ್ಡೌನ್ ಘೋಷಣೆಯಾದಾಗಿನಿಂದಲೂ ಪರಾರಿಯಾಗಿರುವ ತಬ್ಲಿಘಿಗಳ ಹುಡುಕಾಟಕ್ಕೆ ಉತ್ತರ ಪ್ರದೇಶ ಪೊಲೀಸರು ಪ್ರಯತ್ನಿಸುತ್ತಲೇ ಇದ್ದಾರೆ. ಈಗ ಮಸೀದಿಯಲ್ಲಿ ಅಡಗಿಕೊಂಡಿದ್ದ 13 ತಬ್ಲಿಘಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.