ETV Bharat / bharat

13 ವರ್ಷದ ಬಾಲಕಿ ಮೇಲೆ ಅತ್ಯಾಚಾರ... ಕಾಮುಕ ತಂದೆಯ ಬಂಧಿಸಿದ ಪೊಲೀಸರು!

author img

By

Published : Sep 15, 2020, 2:24 AM IST

ಕಳೆದ ಒಂದು ವರ್ಷದಿಂದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಕಾಮುಕ ತಂದೆಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

13 Year Old girl raped in Idukki
13 Year Old girl raped in Idukki

ಇಡುಕ್ಕಿ(ಕೇರಳ): 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಮಲತಂದೆಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವನಿಗಾಗಿ ಬಲೆ ಬೀಸಿದ್ದಾರೆ.

13 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕೇರಳದ ಇಡುಕ್ಕಿಯಲ್ಲಿ ಈ ಘಟನೆ ನಡೆದಿದ್ದು, 13 ವರ್ಷದ ಬಾಲಕಿ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ದೈಹಿಕ ಕಿರುಕುಳ ನೀಡಲಾಗಿದೆ. ಈಗಾಗಲೇ ಮಲತಂದೆಯ ಬಂಧನ ಮಾಡಿರುವ ಪೊಲೀಸರು ಮತ್ತೋರ್ವ ಆರೋಪಿ ನಾಗರಾಜನ್​(45)ಗಾಗಿ ಬಲೆ ಬೀಸಿದ್ದಾರೆ.

ಬಾಲಕಿ ಆಸ್ಪತ್ರೆಗೆ ಬಂದಾಗ ಆಕೆಯ ಮೇಲೆ ದುಷ್ಕೃತ್ಯವೆಸಗಿರುವುದು ಗೊತ್ತಾಗಿದೆ. ಇದಾದ ಬಳಿಕ ಪ್ರಕರಣವನ್ನ ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾವಣೆ ಮಾಡಲಾಗಿದೆ. ಈ ವೇಳೆ ಆಕೆಯ ಹೇಳಿಕೆ ಆಧಾರದ ಮೇಲೆ ಮಲ ತಂದೆಯ ಬಂಧನ ಮಾಡಿ, ಐಪಿಸಿ ಸೆಕ್ಷನ್​​ 354 ಎ, ಪೊಕ್ಸೋ ಕಾಯ್ದೆ ಸೆಕ್ಷನ್​ 27 ಮತ್ತು 08ರ ಅಡಿಯಲ್ಲಿ ಬಂಧನ ಮಾಡಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿ ನಾಗರಾಜನ್​ ವಿರುದ್ಧ ಕೂಡ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಆತ ತಮಿಳುನಾಡಿಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.