ಹೈದರಾಬಾದ್: ರಾಜ್ಯದಲ್ಲಿ ಇಲ್ಲಿಯವರೆಗೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ 153 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ತೆಲಂಗಾಣ ಸರ್ಕಾರ ಸ್ಪಷ್ಟನೆ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಕೆ.ಚಂದ್ರಶೇಖರ್ ರಾವ್ ಈ ಸೋಂಕಿತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ತೆಲಂಗಾಣ ಮಾತ್ರವಲ್ಲ, ಸಾಕಷ್ಟು ರಾಜ್ಯಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಸೋಂಕು ತಗುಲಿದೆ. ದೆಹಲಿಯ ಏಮ್ಸ್ನಲ್ಲಿಯೇ 480 ಮಂದಿಗೆ ಸೋಂಕು ಹರಡಿದೆ ಎಂದು ಸ್ಪಷ್ಟನೆ ನೀಡಿದರು. ಜೊತೆಗೆ ಸರ್ಕಾರಿ ಆಸ್ಪತ್ರೆಗಳು ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡಲು ಸಮರ್ಥವಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ತೆಲಂಗಾಣದಲ್ಲಿ ಸೋಮವಾರ 92 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 142 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.