ETV Bharat / bharat

ಅತ್ಯಾಚಾರಕ್ಕೊಳಗಾದ 17 ವರ್ಷ ಬಾಲಕಿಯಿಂದ ಆತ್ಮಹತ್ಯೆ ಯತ್ನ - ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​ನಲ್ಲಿ ನಡೆದಿದೆ.

17-year-old rape victim tries to commit suicide
17 ವರ್ಷದ ಬಾಲಕಿ ಮೇಲೆ ಅತ್ಯಾಚಾರ
author img

By

Published : Oct 1, 2020, 1:56 PM IST

Updated : Oct 1, 2020, 3:50 PM IST

ಬಾಗ್ಪತ್ (ಉತ್ತರ ಪ್ರದೇಶ): ನೆರೆಹೊರೆಯ ವ್ಯಕ್ತಿವೋರ್ವನು ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಬಾಲಕಿವೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ತಂದೆ ನೀಡಿರುವ ದೂರಿನ ಆಧಾರದ ಮೇಲೆ, ನಸೀಮ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೆ.27 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಬಳಿಕ ಪ್ರಜ್ಞೆ ತಪ್ಪಿದ್ದಳು. ಪ್ರಜ್ಞೆ ಬಂದ ನಂತರ ನಡೆದ ವೃತ್ತಾಂತವನ್ನು ತನ್ನ ತಂದೆಗೆ ವಿವರಿಸಿದ್ದಾಳೆ.

ಬಾಲಕಿಯಿಂದ ಮೋಹಿತಿ ಪಡೆದ ಆಕೆಯ ತಂದೆ, ನಸೀಮ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದರು. ಅತ್ಯಾಚಾರ ಮಾತ್ರವಲ್ಲದೆ ಬಾಲಕಿಗೆ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ 15 ದಿನಗಳಲ್ಲಿ ಇಂತಹದ್ದೇ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಹೆಚ್ಚಾಗಿವೆ. ಹಥ್ರಾಸ್​ನಲ್ಲಿ ಯುವತಿವೋರ್ವಳ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಚರ್ಚೆ ಆಗ್ತಿದೆ. ಮತ್ತೊಂದೆಡೆ ಬಲರಾಂಪುರದಲ್ಲಿ 22 ವರ್ಷದ ಯುವತಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.

Last Updated : Oct 1, 2020, 3:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.