ಕೃಷ್ಣಗಿರಿ(ತಮಿಳುನಾಡು): ಕೇಳಿದ ತಕ್ಷಣ ಬೆಂಕಿ ಪೊಟ್ಟಣ ನೀಡಲಿಲ್ಲ ಎಂದು ಆಕ್ರೋಶಗೊಂಡ ವ್ಯಕ್ತಿಯೋರ್ವ 22 ವರ್ಷದ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 21ರಂದು ಈ ಘಟನೆ ನಡೆದಿದೆ. ಕಂಠಪೂರ್ತಿ ಕುಡಿದಿದ್ದ 17 ವರ್ಷದ ಬಾಲಕ ತನ್ನ ಸಂಬಂಧಿ ಮನೆಗೆ ತೆರಳಿ ಬೀಡಿ ಸೇದಲು ಮ್ಯಾಚ್ ಬಾಕ್ಸ್ ನೀಡುವಂತೆ ಕೇಳಿದ್ದಾನೆ. ಆದರೆ ಮಹಿಳೆ ಬೆಂಕಿ ಪೊಟ್ಟಣ ಕೊಡಲು ನಿರಾಕರಿಸಿದ್ದಾಳೆ.
ಇದರಿಂದ ಆಕ್ರೋಶಗೊಂಡು ಮನೆಗೆ ತೆರಳಿರುವ ಬಾಲಕ ಪಿಸ್ತೂಲ್ ತೆಗೆದುಕೊಂಡು ಬಂದು ಮಹಿಳೆ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆ ಗಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಆರೋಪಿ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ.