ಲಾತೂರ್(ಮಹಾರಾಷ್ಟ್ರ): ಪ್ರತಿಭಟನೆ ನಡೆಸುತ್ತಿದ್ದ ವೇಳೆ 18 ವರ್ಷದ ಯುವತಿಯೋರ್ವಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದ್ದು, ಯಾವ ಕಾರಣಕ್ಕಾಗಿ ಬೆಂಕಿ ಹಚ್ಚಿದ್ದಾರೆ ಎಂಬುದು ನಿಗೂಢವಾಗಿದೆ.
ಮಹಾರಾಷ್ಟ್ರದ ಲಾತೂರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಆಕೆಯ ಮನೆಯ ಮುಂದೆ ಈ ಘಟನೆ ನಡೆದಿದೆ. ಶೇ. 15ರಷ್ಟು ಮಹಿಳೆ ಸುಟ್ಟು ಹೋಗಿದ್ದು ಆಕೆಯನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.