ETV Bharat / bharat

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ದುರುಳ!

author img

By

Published : Dec 14, 2019, 6:48 PM IST

ಉತ್ತರಪ್ರದೇಶದ ಪತೇಪುರ್​​ನಲ್ಲಿ 18 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

18-yr-old raped, set ablaze in UP
ಸಾಂದರ್ಭಿಕ ಚಿತ್ರ

ಪತೇಪುರ್​​(ಉತ್ತರಪ್ರದೇಶ): ಉನ್ನಾವೊ ಅತ್ಯಾಚಾರ, ಕೊಲೆ​​ ಘಟನೆ ಬಳಿಕ ಇದೀಗ ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಪ್ರಕರಣ ನಡೆದಿದೆ. 18 ವರ್ಷದ ಯುವತಿ ಮೇಲೆ ದುಷ್ಕೃತ್ಯ ಎಸಗಿದ ಕಾಮುಕನೋರ್ವ ನಂತರ ಆಕೆಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.

ಉತ್ತರಪ್ರದೇಶದ ಪತೇಪುರ್​​ದಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಯುವತಿ ಕಾನ್ಪುರ್​ ಹಾಸ್ಪಿಟಲ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿರುವ ದುರುಳ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಇದಾದ ಬಳಿಕ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಆಕೆಯ ಮೈಮೇಲೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Intro:Body:

18 ವರ್ಷದ ಯುವತಿ ಮೇಲೆ ರೇಪ್​​... ಬೆಂಕಿ ಹಚ್ಚಿದ ದುಷ್ಕರ್ಮಿ! 

ಪತೇಪುರ್​​(ಉತ್ತರಪ್ರದೇಶ): ಉನ್ನಾವೋ ಅತ್ಯಾಚಾರ, ಮರ್ಡರ್​​ ಘಟನೆ ಬಳಿಕ ಇದೀಗ ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, 18 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕನೋರ್ವ ತದನಂತರ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. 

ಉತ್ತರಪ್ರದೇಶದ ಪತೇಪುರ್​​ದಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸಿರುವ ಯುವತಿಗೆ ಕಾನ್ಪುರ್​ ಹಾಸ್ಪೀಟಲ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪತೇಪುರ್​ ಜಿಲ್ಲಾಧಿಕಾರಿ ಸಂಜೀವ್​​ ಸಿಂಗ್​ ಹೇಳಿದ್ದಾರೆ. 

ಯುವತಿ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿರುವ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಇದಾದ ಬಳಿಕ ಮನೆಯಲ್ಲಿ ಇಟ್ಟಿದ್ದ ಸೀಮೆ ಎಣ್ಣೆ ಆಕೆಯ ಮೇಲೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.