ಹೈದರಾಬಾದ್: ಕೋವಿಡ್-19ನಿಂದ ಚೇತರಿಸಿಕೊಂಡ ಹೈದರಾಬಾದ್ ನಗರದ 182 ಪೊಲೀಸ್ ಸಿಬ್ಬಂದಿ ಗುರುವಾರ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಹೈದರಾಬಾದ್ ನಗರದ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಮಾತನಾಡಿ, "ಹೈದರಾಬಾದ್ ನಗರದ ಉತ್ತರ ವಲಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುತ್ತಿರುವ 182 ಪೊಲೀಸ್ ಅಧಿಕಾರಿಗಳು ಕೋವಿಡ್-19ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದಾರೆ. ಅವರು ಇತರರಿಗೆ ಮಾದರಿಯಾಗಿದ್ದಾರೆ" ಎಂದು ಹೇಳಿದರು.
ತೆಲಂಗಾಣದಲ್ಲಿ 2,092 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 13 ಸಾವುಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 73,050ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 589ಕ್ಕೆ ಏರಿದೆ. 52,103 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ.