ಮುಂಬೈ: ಗೆಳೆಯರೊಂದಿಗೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಯುವತಿಯೋರ್ವಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರಗೈದಿರುವ ಘಟನೆ ಮಹಾರಾಷ್ಟ್ರದ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.
ಜುಲೈ 7ರಂದು ಗೆಳೆಯರ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಯುವತಿ ನಂತರ ಮನೆಗೆ ವಾಪಸ್ ಆಗುತ್ತಿದ್ದಳು. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಒಂದು ವಾರ ಕಳೆದರೂ ಯುವತಿ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ. ಆದರೆ ಆಕೆಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಅರುನಾಗ್ಬಾದ್ ಆಸ್ಪತ್ರೆಗೆ ದಾಖಲು ಮಾಡಿದಾಗ ವೈದ್ಯರು ನಿಜಾಂಶ ತಿಳಿಸಿದ್ದಾರೆ.
ಇದೀಗ ಸಂತ್ರಸ್ತ ಯುವತಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ದೇಹದ ಕೆಲ ಭಾಗಗಳಲ್ಲಿ ಗಾಯಗಳಾಗಿರುವ ಮಾಹಿತಿಯನ್ನು ವೈದ್ಯರು ನೀಡಿದ್ದಾರೆ.
ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376ಡಿ (ಸಾಮೂಹಿಕ ಅತ್ಯಾಚಾರ) ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.