ನವದೆಹಲಿ: ದೆಹಲಿಯ ಆಜಾದ್ ಪುರ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಿದ ನಂತರ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಕಾರ್ಖಾನೆ ಮಾಲೀಕ ರಾಜೇಂದರ್ ಸೋನಿ (63) ಮತ್ತು ದೆಹಲಿಯ ಗುತ್ತಿಗೆದಾರ ಪ್ರಮೋದ್ ದಂಗಿ (35) ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಏಳು ಕಾರ್ಮಿಕರಲ್ಲಿ ಆರು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಭಾನುವಾರ ಬಿಜೆಆರ್ಎಂ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ತಲುಪಿದಾಗ, ಉತ್ತರ ಪ್ರದೇಶದ ಖುರ್ಜಾ ನಿವಾಸಿಗಳಾದ ಇದ್ರಿಸ್ (45) ಮತ್ತು ಸಲೀಮ್ (45) ಎಂಬುವರು ಮೃತಪಟ್ಟಿದ್ದಾರೆ. ಇಸ್ಲಾಂ (40) ಎಂಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಅಬ್ದುಲ್ ಸದ್ದಾಂ (35), ಖುರ್ಜಾದ ಸಲೀಮ್ (35) ಮತ್ತು ಖುರ್ಜಾದ ಮನ್ಸೂರ್ (38) ಅವರನ್ನು ಪ್ರಥಮ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.