ETV Bharat / bharat

ಜೈಷ್ - ಎ - ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಬಂಧನ! - ಬಂಡಿಪೋರಾ ಜಿಲ್ಲೆಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಬಂಧನ

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಪೊಲೀಸರು ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರಾದ ಅಬ್ದುಲ್ ಮಜೀದ್ ಖಾನ್ ಮತ್ತು ಶೌಕತ್ ಅಹ್ಮದ್​ ಎಂಬುವವರನ್ನು ಬಂಧಿಸಿದ್ದು, ಇವರಿಬ್ಬರು ಉಗ್ರ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದರು ಎಂಬ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.

2 JeM associates arrested in North Kashmir
ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಬಂಧನ!
author img

By

Published : Feb 2, 2021, 6:33 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಜೈಷ್ - ಎ - ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಎಸ್‌ಪಿ ಬಂಡಿಪೋರಾ ರಾಹುಲ್ ಮಲಿಕ್, ಉತ್ತರ ಕಾಶ್ಮೀರದಲ್ಲಿ ಉಗ್ರಗಾಮಿ ಶ್ರೇಣಿಯಲ್ಲಿ ಯುವಕರನ್ನು ನೇಮಕ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಬಗ್ಗೆ ನಮಗೆ ಬಹಳ ಹಿಂದಿಯೇ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಜೆಎಂನಲ್ಲಿ ಓವರ್ ಗ್ರೌಂಡ್​ನ ಕೆಲಸಗಾರ ಅಬ್ದುಲ್ ಮಜೀದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಕ್ರಾಲ್ಪುರಾ ಪ್ರದೇಶಕ್ಕೆ ಸೇರಿದ ಖಾನ್ ಈ ಹಿಂದೆ ಉಗ್ರನಾಗಿದ್ದ ಎಂಬುದು ತಿಳಿದು ಬಂದಿದೆ. ಆತನ ವಿಚಾರಣೆಯ ನಂತರ, ಸೊಪೋರ್‌ನ ಮತ್ತೊಬ್ಬ ಓವರ್ ಗ್ರೌಂಡ್​ ಕೆಲಸಗಾರನಾದ ಶೌಕತ್ ಅಹ್ಮದ್‌ನನ್ನು ಬಂಧಿಸಲಾಗಿದೆ.

ಓದಿ: ರೈತರ ಪ್ರತಿಭಟನೆ :ಪಂಜಾಬ್ ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು

ಪೊಲೀಸರ ಪ್ರಕಾರ, ಇಬ್ಬರು ಆರೋಪಿಗಳು ಉಗ್ರರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲದೇ, ಜಮ್ಮು ಮತ್ತು ಉತ್ತರ ಕಾಶ್ಮೀರದಲ್ಲಿ ಯುವಕರನ್ನು ಉಗ್ರಗಾಮಿತ್ವದತ್ತ ಸೆಳೆಯುವುದು ಅವರಿಗೆ ನೀಡಿದ ಜವಾಬ್ದಾರಿಯಾಗಿತ್ತು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.