ಕೋಲ್ಕತ್ತಾ: ಪಶ್ಚಿಮ ಬಂಗಾಳ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದ್ದು ಚುನಾವಣೆ ವೇಳೆ ಶುರುವಾಗಿದ್ದ ಗಲಾಟೆ ಇನ್ನೂ ನಿಂತಿಲ್ಲ. ಗುರುವಾರ ಮುಂಜಾನೆ ನಡೆದ ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ಉತ್ತರ ಕೋಲ್ಕತ್ತಾದ ಭತ್ಪಾರದಲ್ಲಿ ನಡೆದಿದೆ.
ಸದ್ಯ ಈ ಘಟನೆಯನ್ನು ಗಂಭಿರವಾಗಿ ಪರಿಗಣಿಸಿರುವ ಪಶ್ಚಿಮ ಬಂಗಾಳ ಸರ್ಕಾರ ತುರ್ತು ಸಭೆಯನ್ನು ಕರೆದಿದೆ. ಸಿಎಂ ಮಮತಾ ಬ್ಯಾನರ್ಜಿ ಆದೇಶದ ಹಿನ್ನೆಲೆಯಲ್ಲಿ ಸಭೆ ಆಯೋಜನೆ ಮಾಡಲಾಗಿದೆ.
ಘಟನೆಯಲ್ಲಿ ಸಾವನ್ನಪ್ಪಿರುವ ಓರ್ವ 17 ವರ್ಷದ ರಾಂಬಾಬು ಶಾ ಎನ್ನಲಾಗಿದ್ದು, ಈ ಪಾನಿಪುರಿ ವ್ಯಾಪಾರಿ ಎಂದು ತಿಳಿದು ಬಂದಿದೆ. ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಗಾಯಗೊಂಡಿರುವ ಮೂವರು ಸ್ಥಿತಿಯೂ ಚಿಂತಾಜನಕವಾಗಿದೆ.
ಗಲಾಟೆಯಲ್ಲಿ ಕಚ್ಚಾ ಬಾಂಬ್ ಎಸೆಯಲ್ಪಟ್ಟಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಉತ್ತರ ಕೋಲ್ಕತ್ತಾದ ಸಮೀಪದಲ್ಲಿ ನೂತನ ಕಟ್ಟಡ ಉದ್ಘಾಟಿಸುವ ಕಾರ್ಯಕ್ರಮಕ್ಕೂ ಕೆಲ ಗಂಟೆಗೆ ಮುನ್ನ ಈ ಗಲಾಟೆ ನಡೆದಿದೆ.