ಗುವಾಹಟಿ: ಇಂದು ಅಸ್ಸೋಂನ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿರುವ ಬಗ್ಗೆ ವರದಿಯಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಗುವಾಹಟಿಯಿಂದ ಪಶ್ಚಿಮಕ್ಕೆ 44 ಕಿ.ಮೀ. ದೂರದಲ್ಲಿ ತಡರಾತ್ರಿ 1.28ಕ್ಕೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡು ಸೆಕೆಂಡ್ಗಳ ನಂತರ ಬಾರ್ಪೆಟಾ ಜಿಲ್ಲೆಯಲ್ಲಿ ಭೂಮಿ ಕಂಪಿಸಿದೆ. ಭೂಮಿಯ 71 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಇದ್ದು, ರಿಕ್ಟರ್ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ 2:50ಕ್ಕೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕೂಡ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು.