ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಉಗ್ರರ ವಶದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಇಬ್ಬರು ಉಗ್ರರು ಕುಲ್ಗಂ ಜಿಲ್ಲೆಯ ಯಾರಿಪೋರಾದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಿದಾಗ, ಭದ್ರತಾ ಪಡೆಗಳು ಅವರನ್ನು ತಡೆದು ಎನ್ಕೌಂಟರ್ ನಡೆಸಿದ್ದಾರೆ. ಇದರಿಂದಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಅಪಹರಣಕ್ಕೊಳಗಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಕಳೆದ ಎರಡು ದಿನಗಳಲ್ಲಿ, ಇದು ಎರಡನೇ ಅಪಹರಣವಾಗಿದೆ. ಈ ಹಿಂದೆ ಶೋಪಿಯಾನ್ ಜಿಲ್ಲೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಲಾಗಿತ್ತು. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಅಪಹರಣಕ್ಕೊಳಗಾದ ಸಿಬ್ಬಂದಿಯನ್ನು ರಕ್ಷಿಸಿದ್ದರು.