ಮುಂಬೈ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿಲ್ಲವಾದರೂ, ಮತ್ತಿಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಈವರೆಗೆ 2,561 ಪೊಲೀಸ್ ಸಿಬ್ಬಂದಿಗೆ ವೈರಸ್ ಅಂಟಿದ್ದು, ಒಟ್ಟು 33 ಸಿಬ್ಬಂದಿ ಸೋಂಕಿಗೆ ಬಲಿಯಾಗಿದ್ದಾರೆ. 2,561 ಕೇಸ್ಗಳ ಪೈಕಿ 1,495 ಪ್ರಕರಣಗಳು ಸಕ್ರಿಯವಾಗಿದ್ದು, ಇವರಲ್ಲಿ 195 ಅಧಿಕಾರಿಗಳು ಹಾಗೂ 1,303 ಇತರ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಕ್ಕೆ ಐಪಿಸಿ ಸೆಕ್ಷನ್ 188 ರಡಿ 1,23,105 ಕೇಸ್ಗಳು ದಾಖಲಾಗಿದ್ದು, 23,845 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 6.54 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ಅಲ್ಲದೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಕ್ಕೆ 260 ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಸಂಬಂಧ 841 ಆರೋಪಿಗಳನ್ನು ಬಂಧಿಸಿದ್ದಾರೆ.