ಮೌ(ಉತ್ತರ ಪ್ರದೇಶ): ಇಬ್ಬರು ಅಪ್ರಾಪ್ತೆ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಒಬ್ಬ ವ್ಯಕ್ತಿಯ ಬಂಧನ ಮಾಡುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಮತ್ತೋರ್ವನಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.
ಉತ್ತರಪ್ರದೇಶದ ಮೌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಕೆಲ ದಿನಗಳಿಂದ ಸಹೋದರಿಯರ ಮೇಲೆ ಇಬ್ಬರು ಕಾಮುಕರು ನಿರಂತರವಾಗಿ ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮನೆಯಿಂದ ಅವರನ್ನ ಬಲತ್ಕಾರವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದ್ದು, ಇಬ್ಬರು 9 ಹಾಗೂ 10 ವರ್ಷದ ಬಾಲಕಿಯರು ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ತಮ್ಮ ಅಕ್ಕಂದಿರ ಮುಂದೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಓರ್ವ ವ್ಯಕ್ತಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.