ETV Bharat / bharat

ಜೆಎನ್​ಯು ಹಾಸ್ಟೆಲ್​ನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ - ಜೆಎನ್​ಯು ಹಾಸ್ಟೆಲ್

ಕೊರೊನಾ ಸೋಂಕಿಗೆ ಒಳಗಾದ ವಿದ್ಯಾರ್ಥಿಗಳನ್ನು ಐಸೋಲೇಷನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ವಾಸಿಸುವ ಇತರ ವಿದ್ಯಾರ್ಥಿಗಳನ್ನು 14 ದಿನ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

jnu
jnu
author img

By

Published : Jul 8, 2020, 12:49 PM IST

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಪೆರಿಯಾರ್ ಹಾಸ್ಟೆಲ್​ನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹಾಸ್ಟೆಲ್​​ ಅನ್ನು ಸೀಲ್​ಡೌನ್ ಮಾಡಿದೆ. ಹಾಸ್ಟೆಲ್‌ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳನ್ನು 14 ದಿನ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ ವಿದ್ಯಾರ್ಥಿಗಳನ್ನು ಐಸೋಲೇಷನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಕ್ವಾರಂಟೈನ್​ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಆಹಾರ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಆದ್ದರಿಂದ ಅವರು ಎಲ್ಲಿಯೂ ಹೋಗಬೇಕಾಗಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.

ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರು ಪತ್ತೆಯಾದ ಕೂಡಲೇ ಇಡಿ ಹಾಸ್ಟೆಲ್​​ ಅನ್ನು ಸ್ಯಾನಿಟೈಸ್​ಗೊಳಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳಿಗೆ ಹೊರ ಹೋಗದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.