ಜೈಪುರ: ಪಾಕಿಸ್ತಾನದ 21 ಹಿಂದೂ ವಲಸಿಗರಿಗೆ ಇಲ್ಲಿನ ರಾಜಸ್ಥಾನ ಸರ್ಕಾರ ಜೈಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಭಾರತೀಯ ಪೌರತ್ವ ನೀಡಲಾಗಿದೆ.
1,310 ವಲಸಿಗರಿಗೆ ರಾಜಸ್ಥಾನ ಸರ್ಕಾರ ಮತ್ತು ಜೋಧಪುರ, ಜೈಸಲ್ಮೇರ್ ಮತ್ತು ಜೈಪುರದ ಜಿಲ್ಲಾಧಿಕಾರಿಗಳು ಪೌರತ್ವ ನೀಡಿದ್ದಾರೆ ಎಂದು ಗೃಹ ಖಾತೆ ಸಚಿವ ನಿತ್ಯಾನಂದ್ ರೈ ಅವರು ಜುಲೈನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದರು.
ಜನವರಿ 8 ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆಯು, 2014 ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದಿರುವ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಮುಸ್ಲಿಮೇತರರಿಗೆ ಪೌರತ್ವ ನೀಡುತ್ತದೆ. ಆದರೆ, ಈ ಕಾಯ್ದೆ ರಾಜ್ಯಸಭೆಯಲ್ಲಿ ಸ್ಥಗಿತಗೊಂಡಿದೆ.
ರಾಜಸ್ಥಾನದ ಮೂರು ಜಿಲ್ಲೆಗಳಾದ ಜೋಧ್‌ಪುರ, ಜೈಸಲ್ಮೇರ್ ಮತ್ತು ಜೈಪುರದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು ಹಾಗೂ ಆರು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕಾನೂನುಬದ್ಧ ವಲಸಿಗರಿಗೆ ನೋಂದಣಿ ಮೂಲಕ ಭಾರತೀಯ ಪೌರತ್ವವನ್ನು ನೀಡುವ ಅಧಿಕಾರವಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಪಾಕಿಸ್ತಾನದ 21 ಹಿಂದೂ ವಲಸಿಗರಿಗೆ ಭಾರತೀಯ ಪೌರತ್ವ ನೀಡಲಾಗಿದೆ.