ನವದೆಹಲಿ: ಕಳೆದ 24 ಗಂಟೆಗಳಲ್ಲಿ 23,950 ಹೊಸ ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,00,99,066 ಕ್ಕೆ ಏರಿಕೆಯಾಗಿದೆ.
ನಿನ್ನೆ 333 ಮಂದಿ ಕೋವಿಡ್ನಿಂದ ಕೊನೆಯುಸಿರೆಳೆದಿದ್ದು, ಈವರೆಗೆ ಒಟ್ಟು 1,46,444 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 26,895 ಮಂದಿ ಗುಣಮುಖರಾಗಿದ್ದಾರೆ.
ಈವರೆಗೆ ಒಟ್ಟು 96,63,382 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಒಟ್ಟು 2,89,240 ಸಕ್ರಿಯ ಪ್ರಕರಣಗಳಿವೆ.
ದೇಶಾದ್ಯಂತ ಇವರೆಗೆ 16,42,68,721 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದರೆ, ಮಂಗಳವಾರ 10,98,164 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.