ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಹೇಗಿದೆಯೆಂದರೆ ಮೂರು - ನಾಲ್ಕು ದಿನಗಳಲ್ಲೇ ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇತ್ತ ಸಾವಿನ ಸಂಖ್ಯೆ ಕೂಡ 23 ಸಾವಿರದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 28,701 ಸೋಂಕಿತರು ಪತ್ತೆಯಾಗಿದ್ದು, 500 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 8,78,254ಕ್ಕೆ ಹಾಗೂ ಮೃತರ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.62 ಕ್ಕೂ ಹೆಚ್ಚು ಅಂದರೆ 5,53,471 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 3,01,609 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.