ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕತ್ರಾ ಪ್ರದೇಶದಲ್ಲಿ ಇಂದು ಮುಂಜಾನೆ 4:55ರ ಸಮಯದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಗುರುವಾರ ಸಂಜೆ 6.38ರ ಸಮಯದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು ಎಂದು ಭೂಕಂಪನ ಕೇಂದ್ರದ ಮೇಲ್ವಿಚಾರಣಾ ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಜೂನ್ 27ರಂದು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿತ್ತು.
ಜುಲೈ 16ರಂದು ಅಸ್ಸಾಂನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಅದೇ ದಿನ ಮೇಘಾಲಯದಲ್ಲೂ ಕಂಪನವಾಗಿದೆ.