ರಾಯಗಢ(ಛತ್ತೀಸ್ಗಢ): ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಸಾರಂಗಢ ಪೊಲೀಸ್ ಠಾಣೆ ವ್ಯಾಪ್ತಿಯ ಚಾಂಡಯ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಒಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಸ್ಥಳಕ್ಕೆ ಸಾರಂಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು ಲತಾ ಸಾಹು (25) ಎಂದು ಗುರುತಿಸಲಾಗಿದ್ದು, ಐದು ಮತ್ತು ಆರು ವರ್ಷದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಘಟನೆ ಬೆಳಗ್ಗೆ 7.30ರ ವೇಳೆಗೆ ನಡೆದಿದ್ದು, ಮಹಿಳೆಯ ಪತಿ ಸುಖಾರಾಂ ಸಾಹು ಕೆಲಸದ ಮೇರೆಗೆ ಮನೆಯಿಂದ ಹೊರ ಹೋಗಿದ್ದ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.