ಪುಲ್ವಾಮಾ(ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ರಕ್ಷಣಾ ಪಡೆ ಹೊಡೆದುರುಳಿಸಿದೆ.
ಪುಲ್ವಾಮಾ ಜಿಲ್ಲೆಯ ಕಂಗನ್ ಏರಿಯಾದಲ್ಲಿ ಘಟನೆ ನಡೆದಿದ್ದು, ರಕ್ಷಣಾ ಪಡೆಯಿಂದ ಉಗ್ರರಿಗಾಗಿ ಶೋಧ ಕಾರ್ಯ ನಡೆದಿತ್ತು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಸೇನೆಯ ಗುಂಡಿನ ದಾಳಿಗೆ ಮೂವರು ಭಯೋತ್ಪಾದಕರು ಮೃತಪಟ್ಟಿದ್ದು, ಶೋಧ ಕಾರ್ಯ ಮುಂದುವರೆದಿದೆ.