ETV Bharat / bharat

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಮಹಿಳೆಯರ ಸಾವು - ಭಾರಿ ಬೆಂಕಿ

ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು. ಸ್ಫೋಟ ಸಂಭವಿಸಿದ ನಂತರ ಮನೆಗೆ ಭಾರಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.

3 women killed in illicit cracker factory blast

author img

By

Published : May 4, 2020, 8:51 PM IST

ಕೌಶಾಂಬಿ (ಉತ್ತರ ಪ್ರದೇಶ): ಇಲ್ಲಿಗೆ ಹತ್ತಿರದ ಕೋಖ್ರಜ್ ಎಂಬಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಸ್ಫೋಟದಿಂದ ಗೀತಾ ದೇವಿ ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಪುಷ್ಪಾ ಹಾಗೂ ರಾಧಿಕಾ ಎಂಬುವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭರ್ವಾರಿ ಪೊಲೀಸ್ ಔಟ್​ಪೋಸ್ಟ್​ ಬಳಿಯ ಹೈದರ್​ ಅಲಿ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಡಿವೈಎಸ್ಪಿ ರಾಮವೀರ್​ ಸಿಂಗ್ ಹೇಳಿದ್ದಾರೆ.

ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು. ಸ್ಫೋಟ ಸಂಭವಿಸಿದ ನಂತರ ಮನೆಗೆ ಭಾರಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಪಡೆಯವರು ಬೆಂಕಿಯನ್ನು ಹತೋಟಿಗೆ ತಂದರು. ಸ್ಫೋಟದಿಂದ ಸುತ್ತಮುತ್ತಲಿನ ಹಲವಾರು ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.