ಕಂಧಮಾಲ್: ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ.
ಕಂಧಮಾಲ್ ಜಿಲ್ಲೆಯ ತುಮುಡಿಬಂದ್ ಬಳಿಯ ಸಿರ್ಲಾ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ನಕ್ಸಲರ ಬಳಿ ಇದ್ದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.