ETV Bharat / bharat

ಹಥ್ರಾಸ್​​ನಲ್ಲಿ ಮತ್ತೊಂದು ದುಷ್ಕೃತ್ಯ: ನಾಲ್ಕು ವರ್ಷದ ಬಾಲಕಿ ಮೇಲೆ ರೇಪ್​! - ಹಥ್ರಾಸ್​ನಲ್ಲಿ ಅಪ್ರಾಪ್ತೆ ಮೇಲೆ ರೇಪ್​

ಉತ್ತರ ಪ್ರದೇಶದಲ್ಲಿ ಮತ್ತೆ ಎರಡು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಹಥ್ರಾಸ್​​ನಲ್ಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಲಾಗಿದೆ.

Hathras
Hathras
author img

By

Published : Oct 14, 2020, 9:35 AM IST

ಹಥ್ರಾಸ್​​( ಉತ್ತರ ಪ್ರದೇಶ): ಕಳೆದ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುಷ್ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಈಗಾಗಲೇ ಆರೋಪಿಯ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಾಗಿದೆ. ಹಥ್ರಾಸ್​​ನಲ್ಲಿ ಕಳೆದ ತಿಂಗಳ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ನಡೆದಿತ್ತು. ಈ ಕೇಸ್​ಗೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.

  • Hathras: A 4-year-old girl was allegedly raped by her relative in Sasni area. Ruchi Gupta, Circle Officer says, "The accused has been arrested. A case has been registered." (13.11) pic.twitter.com/Xccs4CjIO8

    — ANI UP (@ANINewsUP) October 14, 2020 " class="align-text-top noRightClick twitterSection" data=" ">

ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಸರ್ಕಲ್​ ಇನ್ಸ್​ಪೆಕ್ಟರ್​ ರುಚಿ ಗುಪ್ತಾ, ಬಾಲಕಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

  • Pratapgarh: A minor girl allegedly committed suicide by jumping into a well in Puwasi village y'day, after being repeatedly molestated by three people of her village. Police say, "FIR registered under IPC & POCSO Act. One accused taken into custody. Teams formed to nab other two" pic.twitter.com/h50GOV5raJ

ಮತ್ತೊಂದು ದುಷ್ಕೃತ್ಯ: ಉತ್ತರ ಪ್ರದೇಶದ ಪ್ರತಾಪ್​ಘಡದಲ್ಲಿ ಅಪ್ರಾಪ್ತೆ ಮೇಲೆ ಇಂತಹ ಮತ್ತೊಂದು ದುಷ್ಕೃತ್ಯ ನಡೆದಿದ್ದು, ಅಪ್ರಾಪ್ತೆ ಮೇಲೆ ಪುವಾಸಿ ಗ್ರಾಮದ ಮೂವರು ಲೈಂಗಿಕ ಕಿರುಕುಳವೆಸಗಿದ್ದಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗ್ರಾಮದಲ್ಲಿರುವ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಗಿ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.