ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ, ಇತ್ತ ಚೇತರಿಕೆಯ ಪ್ರಮಾಣದಲ್ಲಿ ಕೂಡ ಹೆಚ್ಚಳವಾಗುತ್ತಿರುವುದು ಸಮಾಧಾನಕರ ವಿಷಯವಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 18,522 ಸೋಂಕಿತರು ಪತ್ತೆಯಾಗಿದ್ದು, 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,66,840ಕ್ಕೆ ಹಾಗೂ ಮೃತರ ಸಂಖ್ಯೆ 16,893ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಚೇತರಿಕೆಯ ಪ್ರಮಾಣದಲ್ಲಿ ಕೂಡ ಗಣನೀಯ ಏರಿಕೆ ಕಂಡು ಬಂದಿದ್ದು, ಶೇ.59.06 ರಷ್ಟು ಅಂದರೆ 3,34,822 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,15,125 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.