ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಇದೀಗ ಆರು ಲಕ್ಷ ಗಡಿ ದಾಟಿದೆ. ಚೇತರಿಕೆಯ ಪ್ರಮಾಣದಲ್ಲೂ ಹೆಚ್ಚಳವಾಗುತ್ತಿರುವುದು ತುಸು ಸಮಾಧಾನಕರ ವಿಷಯವಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 19,148 ಸೋಂಕಿತರು ಪತ್ತೆಯಾಗಿದ್ದು, 434 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 6,04,641ಕ್ಕೆ ಹಾಗೂ ಮೃತರ ಸಂಖ್ಯೆ 17,834ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 3,59,860 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,26,947 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಕೇಸ್ಗಳ ಪೈಕಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಈವರೆಗೆ 1,74,761 ಹಾಗೂ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 90,167 ಕೇಸ್ ಪತ್ತೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ 3ನೇ ಸ್ಥಾನದಲ್ಲಿದ್ದು 87, 360 ಮಂದಿಗೆ ವೈರಸ್ ಅಂಟಿದೆ.