ನವದೆಹಲಿ: ಕಳೆದ 24 ಗಂಟೆಗಳಲ್ಲಿ 46,232 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 90,50,598ಕ್ಕೆ ಏರಿಕೆಯಾಗಿದೆ.
564 ಮಂದಿ ಕೊರೊನಾಗೆ ತುತ್ತಾಗಿ ಕೊನೆಯುಸಿರೆಳೆದಿದ್ದು, ಒಟ್ಟು 1,32,726 ಮಂದಿ ಮೃತಪಟ್ಟಿದ್ದಾರೆ. 49,715 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಈವರೆಗೆ ಒಟ್ಟು 84,78,124 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 4,39,747 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮಂದುವರೆದಿದೆ.
ನಿನ್ನೆ 10,66,022 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ನವೆಂಬರ್ 20 ರವರೆಗೆ 13,06,57,808 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಒಟ್ಟು 90,50,598 ಸೋಂಕಿತರು ಪತ್ತೆಯಾಗಿದ್ದಾರೆ.