ಅಮರಾವತಿ: ಜೂನ್ ತಿಂಗಳಾರಂಭದಿಂದ ಆಂಧ್ರಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು 477 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,929 ತಲುಪಿದೆ.
ಕಳೆದ 24 ಗಂಟೆಗಳಲ್ಲಿ 151 ರೋಗಿಗಳು ಚೇತರಿಸಿಕೊಂಡಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಸರ್ಕಾರದ ಕೋವಿಡ್ -19 ಹೆಲ್ತ್ ಬುಲೆಟಿನ್ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಐವರು ಸಾವಿಗೀಡಾಗಿದ್ದು, ಮೃತಪಟ್ಟವರ ಸಂಖ್ಯೆ 106 ತಲುಪಿದೆ.
ರಾಜ್ಯದಲ್ಲಿ ಇಲ್ಲಿಯವರೆಗೆ 4,307 ಸೋಂಕಿತರು ಗುಣಮುಖರಾಗಿದ್ದು, ಸದ್ಯ 4,516 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜೂನ್ 1 ರಿಂದ ಅನ್ ಲಾಕ್ ಪ್ರಾರಂಭವಾಗಿದ್ದು, ಮೂರು ವಾರಗಳಲ್ಲಿ, ಆಂಧ್ರಪ್ರದೇಶದಲ್ಲಿ 5,253 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ 1,540 ಇತರ ರಾಜ್ಯಗಳಿಂದ ಮತ್ತು 330 ಇತರ ದೇಶಗಳಿಂದ ಬಂದವರಲ್ಲಿ ಕಾಣಿಸಿಕೊಂಡಿವೆ. ಲಾಕ್‌ಡೌನ್ 1.0 ರಿಂದ ಲಾಕ್‌ಡೌನ್ 4.0 ರವರೆಗೆ ಆಂಧ್ರದಲ್ಲಿ 3,668 ಕೊರೊನಾ ಪ್ರಕರಣಗಳು ದಾಖಲಾಗಿದ್ದವು.