ETV Bharat / bharat

ಕಂದಕಕ್ಕೆ ಉರುಳಿ ಬಿದ್ದ ಬಸ್​​: ಐವರು ಸಾವು, 30 ಪ್ರಯಾಣಿಕರಿಗೆ ಗಾಯ! - ಐವರು ಸಾವು, 30 ಪ್ರಯಾಣಿಕರಿಗೆ ಗಾಯ

ಸರ್ಕಾರಿ ಬಸ್​ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ.

5 dead in Himachal bus accident
5 dead in Himachal bus accident
author img

By

Published : Mar 10, 2020, 12:23 PM IST

ಚಂಬಾ(ಹಿಮಾಚಲಪ್ರದೇಶ): 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ವೊಂದು ಆಯ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಚಂಬಾ ಎಂಬಲ್ಲಿ ನಡೆದಿದೆ.

ಇಂದು ಬೆಳಗ್ಗೆ 6.45ರ ವೇಳೆ ಚಿಹಿಲಿಯಿಂದ ಚಂಬಾ ಜಿಲ್ಲೆಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿರುವ ಬಸ್​ ಇದಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳದಲ್ಲೇ ಸಾವನ್ನಪ್ಪಿರುವವರನ್ನ ಯೊಗೇಶ್​ ಕುಮಾರ್​(47), ಪೂಜಾ ಕುಮಾರ್​(28), ರಾಜೀವ್​ ಕುಮಾರ್​(37), ಮೈನಿ ರಾಮ್​(33), ದಾವತ್​ ಅಲಿ(30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತಲುಪಿ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಕೆಲವರ ಪ್ರಾಣ ಉಳಿಸಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.