ಗೊಂಡಾ (ಉತ್ತರ ಪ್ರದೇಶ): ಕರುವನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಐದು ಮಂದಿ ವಿಷಕಾರಿ ಅನಿಲ ಸೇವಿಸಿದ ಪರಿಣಾಮ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಮಹಾರಾಜಗಂಜ್ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದ್ದಾರೆ. ಬಾವಿಗೆ ಬಿದ್ದಿದ್ದ ಕರುವನ್ನು ರಕ್ಷಿಸಲು ಈ ಮೂವರು ವ್ಯಕ್ತಿಗಳು ಬಾವಿಗೆ ಇಳಿದಿದ್ದರು. ಮೂವರು ಮುಳುಗಿದ ನಂತರ ಇವರನ್ನು ರಕ್ಷಿಸಲು ಇನ್ನಿಬ್ಬರು ಬಾವಿಗೆ ಇಳಿದಿದ್ದಾರೆ.
ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳವನ್ನು ಕರೆಸಿ ಮೃತದೇಹಗಳನ್ನು ಹೊರ ತೆಗೆಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ದುರ್ಘಟನೆ ನಡುವೆಯೂ ಕರುವನ್ನು ಜೀವಂತವಾಗಿ ಹೊರ ತರಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿನ್ ಬನ್ಸಾಲ್ ತಿಳಿಸಿದ್ದಾರೆ.