ಮಧ್ಯಪ್ರದೇಶ: ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ಪ್ರಯಾಣಿಕರು ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಬಲ್ಪುರ್ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇಂದು ಮುಂಜಾನೆ ಜಬಲ್ಪುರದಿಂದ 10 ಕಿ. ಮೀ ದೂರದಲ್ಲಿರುವ ಬಾರ್ಗಿ ಬೈಪಾಸ್ ಎಂಬಲ್ಲಿ ಈ ಘಟನೆ ನಡೆದಿದೆ. ಕಾಟ್ನಿಯಿಂದ ಬಾಲಘಾಟ್‌ಗೆ ಹೋಗುತ್ತಿದ್ದ ಬಸ್ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ ಎಂದು ಬಾರ್ಗಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಡಿ ದ್ವಿವೇದಿ ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಬಲ್ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.