ಸುಲ್ತಾನಪುರ: ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಟ್ಯಾಂಕ್‌ನೊಳಗೆ ಬಿದ್ದು ಐವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಪ್ರದೇಶದ ಸುಲ್ತಾನಪುರದಲ್ಲಿ ನಡೆದಿದೆ.
ದೋಸ್ತುಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿರಾನಿ ಪ್ಯಾಟಿ ಗ್ರಾಮದಲ್ಲಿ 10 ಅಡಿ ಆಳದ ಶೌಚಾಲಯದ ಕೆಲಸ ನಡೆಯುತ್ತಿತ್ತು. ಈ ವೇಳೆ ಶೌಚಾಲಯದ ಟ್ಯಾಂಕ್‌ನೊಳಗೆ ಇಳಿದು ಕೆಲಸ ಮಾಡುತ್ತಿದ್ದಾಗ ವಿಷಕಾರಿ ಅನಿಲ ಪಸರಿಸಿದೆ. ಈ ವೇಳೆ ತೀವ್ರ ಉಸಿರಾಟದ ತೊಂದರೆ ಉಂಟಾಗಿ ಕಾರ್ಮಿಕರು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ 25 ವರ್ಷದ ರಾಮ್ ತಿರ್ಥ್, ರವೀಂದ್ರ, ಅಶೋಕ್, ಗಬ್ಬು, ಅಲ್ಲಾಬಕ್ಷ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.