ಕೋಟಾ(ರಾಜಸ್ಥಾನ): 5 ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕನೋರ್ವ ಅತ್ಯಾಚಾರವೆಸಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ಪ್ರದೇಶದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ಬಾಲಕಿಗೆ ತೀವ್ರ ರಕ್ತಸ್ರಾವವಾಗಿದ್ದು, ಮಂಗಳವಾರ ರಾತ್ರಿ ಬರಾನ್ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಬಳಿಕ ಆಕೆಯನ್ನು ಕೋಟಾದ ಜೇ ಕೇ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಹಾಬಾದ್ ಸರ್ಕಲ್ ಇನ್ಸ್ಪೆಕ್ಟರ್ ಕಾಜೋಡ್ಮಲ್ ತಿಳಿಸಿದ್ದಾರೆ.
ಬುಧವಾರ ಮಧ್ಯಾಹ್ನ ಬಾಲಕಿಗೆ ಒಂದು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು. ಇನ್ನೂ ಎರಡು ಶಸ್ತ್ರಚಿಕಿತ್ಸೆಗಳನ್ನು ಮಾಡಬೇಕಿದೆ.
ಕಳೆದ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಬುಡಕಟ್ಟು ಸಮುದಾಯಕ್ಕೆ ಸೇರಿದ ಬಾಲಕಿ ಬಹಿರ್ದೆಸೆಗೆಂದು ಹೋಗಿದ್ದಾಗ, ಕುಡಿದ ಮತ್ತಿನಲ್ಲಿ ಬಂದ ಆರೋಪಿ ಬಾಲಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ಶಹಾಬಾದ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.