ETV Bharat / bharat

ಯುಪಿಯಲ್ಲಿ ಮತ್ತೊಂದು ದುಷ್ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

author img

By

Published : Oct 8, 2020, 7:50 PM IST

ಹಥ್ರಾಸ್​ ಅತ್ಯಾಚಾರ ಪ್ರಕರಣ ಮಾಸುವ ಮೊದಲೇ ಉತ್ತರ ಪ್ರದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದು, ಇದೀಗ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ.

Girl rape
Girl rape

ಪಿಲಿಭಿತ್ (ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್​ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದ್ದು, ಕೇವಲ ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ನೇಚರ್​ ಕಾಲ್​ಗೆ ತೆರಳಿದ್ದ ವೇಳೆ ಬಾಲಕಿಯನ್ನ ಅಪಹರಣ ಮಾಡಿರುವ ಕಾಮುಕ ಪಕ್ಕದ ಗದ್ದೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಆಕೆಯ ಸಹಾಯಕ್ಕೆ ಜನರು ದಾವಿಸುತ್ತಿದ್ದಂತೆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಬಾಲಕಿಯನ್ನ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್​ ಪ್ರಕರಣ ದಾಖಲು ಮಾಡಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೈದ್ಯ ವಿನಿತಾ ಚತುರ್ವೆದಿ, ಬಾಲಕಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಇದೀಗ ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.