ಕೋಲ್ಕತ್ತಾ (ಪಶ್ಚಿಮ ಬಂಗಾಳ): 50 ಲಕ್ಷ ಮುಸ್ಲಿಂ ಒಳನುಸುಳುಕೋರರನ್ನು ಗುರುತಿಸಿ, ಅಗತ್ಯವಿದ್ದರೆ ದೇಶದಿಂದ ಹೊರಕ್ಕೆ ಕಳಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆ ನೀಡಿದ್ದಾರೆ.
ಇಲ್ಲಿನ ಪರಗಣ ಜಿಲ್ಲೆಯಲ್ಲಿ ನಡೆದ ಜಾಥಾ ಉದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂ ಒಳನುಸುಳುಕೋರರನ್ನು ಮೊದಲು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಇದರಿಂದ 2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮತಗಳು ಕ್ಷೀಣಿಸುತ್ತವೆ. ಇದರಿಂದ ಬಿಜೆಪಿ 200 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ದೀದಿಗೆ 50 ಕ್ಷೇತ್ರಗಳನ್ನು ಗೆಲ್ಲಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರನ್ನು "ನಾಯಿಗಳಂತೆ ಗುಂಡು ಹಾರಿಸಬೇಕು" ಎಂದು ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
"ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸರ್ಕಾರಗಳು ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡು ಹಾರಿಸಿ ಸರಿಯಾದ ಕೆಲಸ ಮಾಡಿವೆ" ಎಂದು ಕೂಡಾ ಹೇಳಿದ್ದರು.