ಸಹರಾನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಒಂದೂವರೆ ತಿಂಗಳ ಕಾಲ ಜೈಲಿನಲ್ಲಿದ್ದ ಒಟ್ಟು 57 ವಿದೇಶಿ ತಬ್ಲಿಘಿ ಜಮಾತ್ ಸದಸ್ಯರನ್ನು ನ್ಯಾಯಾಲಯದ ಆದೇಶದಂತೆ ಬಿಡುಗಡೆ ಮಾಡಲಾಗಿದೆ.
ಕಿರ್ಗಿಸ್ತಾನ್, ಬಾಂಗ್ಲಾದೇಶ ಮತ್ತು ಥೈಲ್ಯಾಂಡ್ ದೇಶಗಳಿಂದ ಬಂದ ತಬ್ಲಿಘಿಗಳನ್ನು ಸಹರಾನ್‌ಪುರ ಜಿಲ್ಲಾ ಜೈಲಿನಲ್ಲಿ ಇರಿಸಲಾಗಿತ್ತು. ಈಟಿವಿ ಭಾರತ ಜೊತೆ ಮಾತನಾಡಿದ ತಬ್ಲಿಘಿ ಪರ ವಕೀಲ ಜಾನ್ ನಿಸಾರ್, ಜಿಲ್ಲೆಯ ವಿವಿಧ ಮಸೀದಿಗಳಲ್ಲಿದ್ದ ಇವರನ್ನು ಪೊಲೀಸರು ಬಂಧಿಸಿ ಕರೆ ತಂದಿದ್ದರು. ಇವರ ಮೇಲೆ ಚಾರ್ಜ್ಶೀಟ್ ಕೂಡಾ ಸಲ್ಲಿಸಿದ್ದರು.
ಐಪಿಸಿಯ ಸೆಕ್ಷನ್ 188 ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡು ಬಂದಿದೆ. ತಬ್ಲಿಘಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡು ಮನೆಗೆ ಕಳುಹಿಸುವಂತೆ ನ್ಯಾಯಾಲಯವನ್ನು ಕೇಳಿಕೊಂಡರು ಎಂದು ಅವರು ಹೇಳಿದರು.
ನ್ಯಾಯಾಲಯ ಇವರಿಗೆ ಒಂದು ತಿಂಗಳ ಕಾಲ ಶಿಕ್ಷೆ ವಿಧಿಸಿತ್ತು. ನಿನ್ನೆ ಬಿಡುಗಡೆಯ ಆದೇಶ ತಲುಪಿದ್ದರಿಂದ ಇಂದು 57 ಸದಸ್ಯರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲರನ್ನೂ ಖಾಸಗಿ ರೆಸಾರ್ಟ್ನಲ್ಲಿ ಇರಿಸಲಾಗುವುದು. ಅವರವರ ದೇಶಕ್ಕೆ ತೆರಳಲು ವ್ಯವಸ್ಥೆ ಮಾಡುವವರೆಗೂ ಅಲ್ಲೇ ಉಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.