ಪುಣೆ: ದೇಶದಲ್ಲಿ ಕೊರೊನಾ ನರ್ತನ ಜೋರಾಗಿದ್ದು, ಈಗಾಗಲೇ 42 ಸಾವಿರಕ್ಕೂ ಹೆಚ್ಚು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆಸಲ್ಲಿಸುತ್ತಿದ್ದ 57 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ನಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪುಣೆ ಜಂಟಿ ಕಮಿಷನರ್ ರವೀಂದ್ರ ಶಿಶೈ ತಿಳಿಸಿದ್ದಾರೆ.
ಏಪ್ರಿಲ್ ಕೊನೆಯ ವಾರದಲ್ಲಿ ಇವರಿಗೆ ಕೊರೊನಾ ಇರುವುದು ಕನ್ಫರ್ಮ್ ಆಗಿತ್ತು. ಅಂದಿನಿಂದಲೂ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಪುಣೆಯಲ್ಲಿ 12 ಜನ ಪೊಲೀಸರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಮಹಾರಾಷ್ಟ್ರದಲ್ಲಿ ಕಂಡು ಬಂದಿರುವುದು ಗಮನಾರ್ಹ ವಿಚಾರ.