ಬೆತುಲ್ (ಮಧ್ಯಪ್ರದೇಶ ): ನಿಯಂತ್ರಣ ಕಳೆದುಕೊಂಡ ಟ್ರಕ್ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಹಾಗೂ ಐವರು ಕಾರ್ಮಿಕರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತವಾ ನದಿಯ ಸೇತುವೆ ಮೇಲೆ ಕಬ್ಬಿಣದ ಸರಳುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ದುರಂತದಲ್ಲಿ ಚಾಲಕ ಹಾಗೂ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದಲ್ಲಿರುವ ಕಥಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕ್ರೇನ್ ಮೂಲಕ ಟ್ರಕ್ನಡಿ ಸಿಕ್ಕಿಬಿದ್ದ ಮೃತದೇಹಗಳನ್ನು ಹೊರತೆಗೆದು ಘೋಡಡೋಂಗ್ರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.