ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣ - Bolero car accident
ಕಾರು ಅಪಘಾತವಾಗಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಉತ್ತರ ಪ್ರದೇಶದ ಸಿದ್ಧಾರ್ಥ್ ನಗರದಲ್ಲಿ ಈ ಘಟನೆ ನಡೆದಿದೆ.
ಸಿದ್ಧಾರ್ಥ್ ನಗರ್ (ಉ.ಪ್ರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬಕ್ಕೆ ಸೇರಿದ 6 ಮಂದಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಪ್ರಾಥಮಿಕ ವರದಿ ಪ್ರಕಾರ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮುಡಿ ಕೊಡುವ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 223ರಲ್ಲಿ ಘಟನೆ ಸಂಭವಿಸಿದೆ.
ಇನ್ನು ಬಿಹಾರದಿಂದ ಮರಳುತ್ತಿದ್ದ ಕುಟುಂಬಸ್ಥರಿದ್ದ ಕಾರು ಬೆಳಗ್ಗೆ ಸುಮಾರು 6 ಗಂಟೆಗೆ ರಸ್ತೆಯ ಡಿವೈಡರ್ಗೆ ಡಿಕ್ಕಿಯಾಗಿ ರಸ್ತೆಯಿಂದ ಕೆಳಗಿಳಿದಿದೆ. ಘಟನೆಯಲ್ಲಿ 6 ಮಂದಿ ಸ್ಥಳದಲ್ಲೇ ಸಾವನಪ್ಪಿದರೆ ಮೂವರಿಗೆ ಗಾಯವಾಗಿದೆ.
ಅಪಘಾತದ ಬಳಿಕ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ.