ಗೋಲ್ಪರ(ಅಸ್ಸೋಂ): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 6 ಪ್ರಯಾಣಿಕರು ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಇಂದು ಬೆಳಗ್ಗೆ ಗೋಲ್ಪರ ಜಿಲ್ಲೆಯ ಕುಥಾಕುತಿ ಪ್ರದೇಶದ ದುಪ್ಧಾರ ಬಳಿ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್, ನಂತರ ಕಂದಕಕ್ಕೆ ಉರುಳಿದೆ.
ಗುವಾಹಟಿಯಿಂದ ದುಬ್ರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಸ್ಥಳದಲ್ಲೇ ಮೃತಪಟ್ಟ 6 ಜನರನ್ನು ಹೊರತುಪಡಿಸಿ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಗೋಲ್ಪರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.