ದುಮ್ಕಾ(ಜಾರ್ಖಂಡ್): ಮದುವೆ ಮನೆಯಲ್ಲಿ ಆಹಾರ ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರೋ ಘಟನೆ ಜಾರ್ಖಂಡ್ನ ಚಂದನ್ ಪಹಾರಿ ಎಂಬ ಗ್ರಾಮದಲ್ಲಿ ನಡೆದಿದೆ.
ಅಸ್ವಸ್ಥರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಸಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ 40ಕ್ಕೂ ಹೆಚ್ಚು ಜನರನ್ನ ದುಮ್ಕ ನಗರಕ್ಕೆ ಕೊಂಡೊಯ್ಯಲಾಗಿದೆ.
ಮದುವೆ ಮನೆಯಲ್ಲಿ ಸಿದ್ದಪಡಿಸಿದ್ದ ಆಹಾರದಲ್ಲಿ ಹಲ್ಲಿ ಬಿದ್ದಿತ್ತು. ಅದೇ ಆಹಾರವನ್ನ ಸೇವಿಸಿದ್ದರಿಂದ 60ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.