ETV Bharat / bharat

ಗಯಾ ಸಮೀಪ ರಸ್ತೆ ಅಪಘಾತ: 7 ಮಂದಿ ಮೃತ, ನಾಲ್ವರ ಸ್ಥಿತಿ ಚಿಂತಾಜನಕ - ಅಪಘಾತ

ಬಿಹಾರದ ಗಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್​ ಮತ್ತು ಎರಡು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

accident
ರಸ್ತೆ ಅಪಘಾತ
author img

By

Published : Jun 15, 2020, 2:34 PM IST

ಗಯಾ(ಬಿಹಾರ): ಜಿಲ್ಲೆಯ ಜಿಟಿ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್​ವೊಂದು ಅಲ್ಲೇ ಸಮೀಪದಲ್ಲಿದ್ದ ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಗಯಾದ ಅಮಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಶುಂಗಂಜ್ ಗ್ರಾಮದ ಸಮೀಪದ ಜಿಟಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿದ್ದ ಎರಡು ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಶವಗಳನ್ನು ಅನುಗ್ರಾ ನಾರಾಯಣ್ ಮಗಧ್ ವೈದ್ಯಕೀಯ ಕಾಲೇಜು ಮತ್ತು ಗಯಾ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದು, ಗಾಯಗೊಂಡವರನ್ನು ಮದನ್‌ಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಮಾಸ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರು ರಂಗಾಬಾದ್ ಜಿಲ್ಲೆಯ ಬಲುಗಂಜ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿ, ತಮ್ಮ ಗ್ರಾಮವಾದ ರೆಗಾನಿಯಾಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.