ETV Bharat / bharat

ಕೌಟುಂಬಿಕ ಕಲಹದಿಂದ ಬಂಧಿತನಾದ ವ್ಯಕ್ತಿ ಏಳು ಜನ ಪೊಲೀಸರನ್ನೇ ಕ್ವಾರಂಟೈನ್​ಗೆ ಕಳಿಸಿದ! - ಕೊರೊನಾ ಕ್ವಾರಂಟೈನ್​ ಸುದ್ದಿ

ಕೌಟುಂಬಿಕ ಕಲಹ ಹಿನ್ನೆಲೆ ಬಂಧಿಯಾದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್​ ಬಂದ ಹಿನ್ನೆಲೆ ಆತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನ ಪೊಲೀಸರನ್ನು​ ಕ್ವಾರಂಟೈನ್​ ಕೇಂದ್ರಕ್ಕೆ ಕಳುಹಿಸಲಾಗಿದೆ.

7 policemen put under quarantine
ಶ್ರೀನಗರದಲ್ಲಿ ಏಳು ಪೊಲೀಸರು ಕ್ವಾರಂಟೈನ್​
author img

By

Published : Jun 3, 2020, 7:32 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನು ಕೊವಿಡ್​-19 ಟೆಸ್ಟ್​ಗೆ ಒಳಪಡಿಸಿದಾಗ, ಆತನಲ್ಲಿ ಕೊರೊನಾ ಪಾಸಿಟಿವ್​ ಕಂಡು ಬಂದಿದೆ. ಅವನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನ ಪೊಲೀಸರನ್ನು​ ಸಹ ಕ್ವಾರಂಟೈನ್​ಗೆ ಕಳುಹಿಸಲಾಗಿದೆ.

ಶ್ರೀನಗರದ ರೈನಾವರಿ ಪ್ರದೇಶದ ಕಲೈ-ಅಂದಾರ್ ನಲ್ಲಿ, ಪತ್ನಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿತನಾಗಿದ್ದ. ನಂತರ ಆತನಿಗೆ ಕೆಮ್ಮು-ಜ್ವರ ಕಾಣಿಸಿಕೊಂಡ ಹಿನ್ನೆಲೆ ಆತನನ್ನು ಕೋವಿಡ್​-19 ಟೆಸ್ಟ್​ಗೆ ಒಳಪಡಿಸಲಾಗಿತ್ತು.

ಈತನಿಗೆ ಕೊರೊನಾ ಪಾಸಿಟಿವ್​ ಬಂದ ಹಿನ್ನೆಲೆ ಆತನನ್ನು ಕೋವಿಡ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಏಳು ಜನ ಪೊಲೀಸರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಕ್ವಾರಂಟೈನ್​ನಲ್ಲಿರಿಸಲಾಗಿದೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.