ವಿಶಾಖಪಟ್ಟಣ (ಆಂಧ್ರ ಪ್ರದೇಶ): ನೆರೆಯ ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 71 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ರಾಜ್ಯದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1403ಕ್ಕೇರಿದ್ದು, ಇದರಲ್ಲಿ ಈವರೆಗೆ 31 ಜನ ಸಾವನ್ನಪ್ಪಿದ್ದಾರೆ. ಉಳಿದಂತೆ 321 ಜನ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1051ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆಂಧ್ರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ.
ಕರ್ನೂಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 386ಕ್ಕೇರಿದೆ. ಗುಂಟೂರು ಜಿಲ್ಲೆಯಲ್ಲಿ 287 ಹಾಗೂ ಕೃಷ್ಣಾ ಜಿಲ್ಲೆಯಲ್ಲಿ 246 ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 6497 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ.